ಫೆ.8 ರಂದು ಬಜೆಟ್ ಮಂಡಿಸುವುದು ಖಚಿತ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
Update: 2019-02-05 20:51 IST
ಮೈಸೂರು,ಫೆ.5: ರಾಜ್ಯ ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಧಕ್ಕೆಯಿಲ್ಲ ಫೆ.8 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮಂಗಳವಾರ ಸುತ್ತೂರಿಗೆ ಆಗಮಿಸಿದ ಅವರು ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಮತ್ತೆ ಹುಟ್ಟಿದೆ. ಅದು ಸಾಧ್ಯವಿಲ್ಲ, ರಾಜ್ಯ ಸರ್ಕಾರ ಸುಭದ್ರವಾಗಿಯೇ ಉಳಿದಿದೆ. ಐದು ವರ್ಷಗಳ ಕಾಲ ಸುಭದ್ರವಾಗಿಯೇ ಇರಲಿದೆ ಎಂದು ಹೇಳಿದರು.