ಉಡುಪಿ: ಜಿಪಂ ಅಧ್ಯಕ್ಷರಿಂದ ಹೆದ್ದಾರಿ ಕಾಮಗಾರಿ ಪರಿಶೀಲನೆ
Update: 2019-02-05 21:30 IST
ಉಡುಪಿ, ಫೆ.5:ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಿಂದ ಸಾರ್ವಜನಿಕ ರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸಿದ ಕಂಪೆನಿಯ ಇಂಜಿನಿಯರ್ ಜೊತೆ ಕಿನ್ನಿಮುಲ್ಕಿಯಲ್ಲಿ ಅಗತ್ಯವಾಗಿ ನಿರ್ವಹಿಸಬೇಕಾದ ಕಾಮಗಾರಿಗಳ ಬಗ್ಗೆ ಜಿಪಂ ಅಧ್ಯಕ್ಷ ದಿನಕರಬಾಬು ಸ್ಥಳಕ್ಕೆ ಭೇಟಿ ನೀಡಿ ಮಂಗಳವಾರ ಪರಿಶೀಲಿಸಿದರು.
ಉದ್ಯಾವರದಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆಯೂ ಸಹ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಲೆವೂರು ಗ್ರಾಪಂ ಅಧ್ಯಕ್ಷ ಶ್ರೀಕಾಂತ ನಾಯಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣ ಪ್ರಭ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.