ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್. ಶೇಖರ ಮಡಿವಾಳ ಆಯ್ಕೆ
Update: 2019-02-05 21:32 IST
ಉಡುಪಿ, ಫೆ.5: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಾರ್ಕಳದ ನ್ಯಾಯವಾದಿ ಎಚ್. ಶೇಖರ್ ಮಡಿವಾಳ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ನೇಮಿಸಿದ್ದಾರೆ.
ಎಚ್. ಶೇಖರ್ ಮಡಿವಾಳ ಹೆಬ್ರಿ ಮಂಡಲ ಪಂಚಾಯತ್‌ನ ಸದಸ್ಯರಾಗಿ, ಕಾರ್ಕಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ಕಾರ್ಕಳ ತಾಪಂ ಉಪಾಧ್ಯಕ್ಷರಾಗಿ, ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಯಾಗಿರುತ್ತಾರೆ.