ಕೋಟ ಜೋಡಿ ಕೊಲೆ ಪ್ರಕರಣ: ಯಾವುದೇ ಆರೋಪಿಯನ್ನು ಬಂಧಿಸಿಲ್ಲ- ಎಸ್ಪಿ ಸ್ಪಷ್ಟನೆ
ಉಡುಪಿ, ಫೆ.5: ಕೋಟ ಜೋಡಿ ಕೊಲೆ ಪ್ರಕರಣದ ತನಿಖೆ ಮುಂದುವರೆ ದಿದ್ದು, ಈ ಸಂಬಂಧ ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬ.ನಿಂಬರ್ಗಿ ತಿಳಿಸಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿಗಳಾದ ರೆಡ್ಡಿ ಸಹೋದರರನ್ನು ಬಂಧಿಸ ಲಾಗಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಎಸ್ಪಿ ಈ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಾಲ್ಕು ಪೊಲೀಸ್ ತಂಡಗಳನ್ನು ರಚಿಸ ಲಾಗಿದ್ದು, ಈ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ. ಪ್ರಮುಖ ಆರೋಪಿಗಳು ಮೂಲತಃ ಆಂಧ್ರಪ್ರದೇಶದವರಾಗಿರುವುದರಿಂದ ಒಂದು ತಂಡ ಆಂಧ್ರಪ್ರದೇಶಕ್ಕೆ ತೆರಳಿರುವ ಬಗ್ಗೆ ಮೂಲಗಳು ತಿಳಿಸಿವೆ.
ಅದೇ ರೀತಿ ಉಳಿದ ಮೂರು ತಂಡಗಳು ಶಿವಮೊಗ್ಗ, ತುಮಕೂರು ಸೇರಿ ದಂತೆ ವಿವಿಧೆಡೆಗಳಲ್ಲಿ ಆರೋಪಿಗಳಿಗೆ ಶೋಧ ಕಾರ್ಯ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿ ಹಲವು ಮಂದಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಕಳೆ ಹಾಕಿ ಬಿಟ್ಟಿದ್ದಾರೆ ಎಂದು ಪೊಲೀಸ್ ಮೂಲ ಗಳು ತಿಳಿಸಿವೆ.