ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ

Update: 2019-02-05 17:43 GMT

ಮಂಗಳೂರು, ಫೆ. 5: ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯು ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜರುಗಿತು. ಈ ಸಂದರ್ಭ ಕ್ರೀಡಾ ಸಚಿವರಾದ ಬಳಿಕ ಪ್ರಥಮ ಬಾರಿಗೆ ದ.ಕ.ಜಿಲ್ಲೆಗೆ ಆಗಮಿಸಿದ ರಹೀಂ ಖಾನ್ ಮತ್ತು ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯನ್ನಿಟ್ಟುಕೊಂಡು ಪ್ರತೀ ಬ್ಲಾಕ್ ಮಟ್ಟದಲ್ಲಿ ನೂರು ಜನರೊಂದಿಗೆ ಚಿಂತನಾ ಮಂಥನ ಕಾರ್ಯಕ್ರಮ, ತರಬೇತಿ ಶಿಬಿರ ಹಾಗೂ ಫೆ.26ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೆಹರೂ ಮೈದಾನದಲ್ಲಿ ಸಮಾವೇಶವು ಹಮ್ಮಿಕೊಳ್ಳಲಾಗಿದೆ ಎಂದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಕೋಮುವಾದಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಪಕ್ಷಕ್ಕಾಗಿ ತ್ಯಾಗ ಮಾಡಬೇಕು. ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News