×
Ad

ಫೆ.11ಕ್ಕೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

Update: 2019-02-06 18:56 IST

ಬೆಂಗಳೂರು, ಫೆ. 6: ಮಾಧ್ಯಮ ಅಕಾಡೆಮಿಯ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಫೆ.11ರ ಸಂಜೆ 5:30ಕ್ಕೆ ಇಲ್ಲಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಜೀವಮಾನ ಸಾಧನೆ ಗೈದ ಪತ್ರಕರ್ತರಿಗೆ ಆಂದೋಲನ, ಅಭಿಮಾನಿ, ಅರಗಿಣಿ, ಮೈಸೂರು ದಿಗಂತ ಹಾಗೂ ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿ ಸೇರಿ 50 ಮಂದಿಗೆ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುಸ್ತಕಗಳ ಬಿಡುಗಡೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೆರವೇರಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ರೋಷನ್‌ ಬೇಗ್ ವಹಿಸಲಿದ್ದು, ಪಂಕಜ್‌ ಕುಮಾರ್ ಪಾಂಡೆ, ವಾರ್ತಾ ಇಲಾಖೆ ನಿರ್ದೇಶಕ ಎಂ.ರವಿಕುಮಾರ್ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News