ಉಡುಪಿ: ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ
Update: 2019-02-06 20:29 IST
ಉಡುಪಿ, ಫೆ.6: ಉಡುಪಿ ಶ್ರೀರಾಮಕೃಷ್ಣ ಹೆಗಡೆ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಪ್ರಾಯೋಜಿತ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಭಾಗಿತ್ವದಲ್ಲಿ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯರಿಗೆ ಇತ್ತೀಚೆಗೆ ಏರ್ಪಡಿಸ ಲಾಗಿತ್ತು.
ಕೊಂಕಣ ರೈಲ್ವೆ ವಿಭಾಗದ ಸೀನಿಯರ್ ಮ್ಯಾನೇಜರ್ ದಿಲೀಪ್ ಭಟ್ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರವನ್ನು ವಿತರಿಸಿದರು. ಕಾಲೇಜಿನ ಪ್ರಾಂಶು ಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗೌರಿ ಎಸ್.ಭಟ್, ಕೊಂಕಣ್ ರೈಲ್ವೆ ವಿಭಾಗ ಹಿರಿಯ ತರಬೇತುದಾರ ಶ್ರೀಧರ್ ಅವೃತ ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉಮೇಶ್ ಮಯ್ಯ ಕಾರ್ಯಕ್ರಮ ನಿರೂಪಿಸಿದರು. 145 ವಿದ್ಯಾರ್ಥಿನಿಯರು ತರಬೇತಿಯ ಪ್ರಯೋಜನವನ್ನು ಪಡೆದರು.