×
Ad

ಕ್ಯಾನ್ಸರ್ ಉಚಿತ ತಪಾಸಣೆ -ಮಾಹಿತಿ ಶಿಬಿರ

Update: 2019-02-06 20:33 IST

ಉಡುಪಿ, ಫೆ.6: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದ ವತಿಯಿಂದ ಎಲ್‌ಐಸಿ ಆಫ್ ಇಂಡಿಯಾ ಉಡುಪಿ ಶಾಖೆಯ ಪ್ರಾಯೋಜಕತ್ವದಲ್ಲಿ ಗರ್ಭಾಶಯದ ಕೊರಳಿನ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್‌ನ ಉಚಿತ ತಪಾಸಣೆ ಹಾಗೂ ಮಾಹಿತಿ ಶಿಬಿರವನ್ನು ಫೆ.4ರಂದು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ ಆಚಾರ್ಯ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಎಲ್‌ಐಸಿ ಉಡುಪಿ ಶಾಖೆಯ ಆರೋಗ್ಯ ವಿಮೆ ವ್ಯವಸ್ಥಾಪಕ ಮೋಹನ್‌ದಾಸ್, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ., ಎಲ್‌ಐಸಿ ಉಡುಪಿ ಶಾಖೆಯ ರಾಧಾಕೃಷ್ಣ ಹೆಗ್ಡೆ, ಉಷಾ ಮುಖ್ಯ ಅತಿಥಿಗಳಾಗಿದ್ದರು.

ಆಸ್ಪತ್ರೆಯ ಉಪ ವೈದ್ಯಕೀಯ ಅದೀಕ್ಷಕ ಡಾ.ದೀಪಕ್ ಎಸ್.ಎಂ., ಸ್ನಾತ ಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್, ಸ್ನಾತಕೋತ್ತರ ವಿಭಾಗದ ಸಹಾಯಕ ಡೀನ್ ಡಾ.ನಾಗರಾಜ್ ಎಸ್., ಆಸ್ಪತ್ರೆಯ ವ್ಯವಸ್ಥಾಪಕ ಶ್ರೀನಿವಾಸ ಹೆಗ್ಡೆ ಉಪಸ್ಥಿತರಿದ್ದರು. ಈ ಉಚಿತ ತಪಾಸಣೆ ಹಾಗೂ ಮಾಹಿತಿ ಶಿಬಿರವು ಫೆ.10ರವರೆಗೆ ಬೆಳಿಗ್ಗೆ 9ರಿಂದ 5ರ ತನಕ ನಡೆಯಲಿದೆ.

ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಹಾಗೂ ವಸ್ತು ಪ್ರದರ್ಶನ ವನ್ನು ಏರ್ಪಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News