ಉಡುಪಿ: ಫೆ.8ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ
ಉಡುಪಿ, ಫೆ.6: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಫೆ.8ನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ 1ರಿಂದ 19ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುವುದರಿಂದ ಅಂದು 1ರಿಂದ 19ವರ್ಷ ದೊಳಗಿನ ಮಕ್ಕಳಿಗೆ ಜಂತುಹುಳದ ಅಲ್‌ಬೆಂಡಾಜೋಲ್ 400 ಮಿ.ಲಿ.ಗ್ರಾಂ ಮಾತ್ರೆಯನ್ನು ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಉಚಿತ ವಾಗಿ ನೀಡಲಾಗುತ್ತದೆ.
ಫೆ.8ರಂದು ಅಲ್‌ಬೆಂಡಾಜೋಲ್ 400 ಮಿ.ಲಿ.ಗ್ರಾಂ ಮಾತ್ರೆಯನ್ನು ಪಡೆಯದೇ ಬಾಕಿ ಇರುವ ಮಕ್ಕಳಿಗೆ ಮತ್ತು ಅಂಗನವಾಡಿ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಫೆ.14ರಂದು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಿ.ಮ.ಆ.ಸಹಾಯಕಿಯರು ಜಂತುಹುಳದ ಮಾತ್ರೆಯನ್ನು ನೀಡುತ್ತಾರೆ.
ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜ್‌ಗಳಲ್ಲಿ, ಅಂಗನವಾಡಿಗಳಲ್ಲಿ, ನರ್ಸಿಂಗ್ ಕಾಲೇಜ್‌ಗಳಲ್ಲಿ, ಅನಾಥಾಶ್ರಮಗಳಲ್ಲಿ ಹಾಗೂ ಐಟಿಐ ಮತ್ತು ಡಿಪ್ಲೋಮ ತರಬೇತಿ ಸಂಸ್ಥೆಗಳಲ್ಲಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು. ಇದು ಚೀಪುವ ಮಾತ್ರೆಯಾಗಿದ್ದು, ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿ ಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರ ಉಪಸ್ಥಿತಿಯಲ್ಲಿ ನೀಡಲಾಗುವುದು.
1ವರ್ಷದಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ, 2ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆಯನ್ನು ನೀಡಲಾಗುತ್ತದೆ. ಜಿಲ್ಲೆಯಲ್ಲಿ ತಾಲೂಕುವಾರು ಇರುವ ಒಂದರಿಂದ 19 ವರ್ಷದೊಳಗಿನ ಮಕ್ಕಳ ಸಂಖ್ಯೆ ಹೀಗಿದೆ. ಉಡುಪಿ ತಾಲೂಕು-1,25,148, ಕುಂದಾಪುರ-87,685, ಕಾರ್ಕಳ-49,465, ಜಿಲ್ಲೆಯಲ್ಲಿ ಒಟ್ಟು-2,62,298.
ಜಂತುಹುಳ ಬಾಧೆಯ ಪರಿಣಾಮಗಳು: ಜಂತುಹುಳದಿಂದ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಸಾಮರ್ಥ್ಯದ ಮೇಲೆ ಪರಿಣಾಮಗಳುಂಟಾಗುತ್ತದೆ. *ಜಂತುಹುಳದಿಂದ ಮಕ್ಕಳು ಹೆಚ್ಚಾಗಿ ರೋಗಗ್ರಸ್ತರಾಗಿ ಶಾಲೆಗಳಿಗೆ ಗೈರು ಹಾಜರಾಗುತ್ತಾರೆ ಹಾಗೂ ತರಗತಿಯಲ್ಲಿ ಪಾಠದಲ್ಲಿ ಏಕಾಗ್ರತೆ ನೀಡಲು ವಿಫಲರಾಗುತ್ತಾರೆ.
* ಮಕ್ಕಳ ಶಾರೀರಿಕ ಹಾಗೂ ಬೌದ್ದಿಕ ಬೆಳವಣಿಗೆ ಕುಂಠಿತ ವಾಗಿ ಭವಿಷ್ಯದಲ್ಲಿ ಅವರ ಕೆಲಸ ಮಾಡುವ ಸಾಮರ್ಥ್ಯ ಕಡಿಮೆಯಾಗ ಬಹುದು.
ಜಂತುಹುಳ ರೋಗ ಹರಡುವ ರೀತಿ: ನೈರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರ, ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವು ದರಿಂದ ಜಂತುಹುಳ ಬಾಧೆ ಬರುತ್ತದೆ.
ಜಂತುಹುಳ ಬಾಧೆಯ ಲಕ್ಷಣಗಳು: ಯಾವ ಮಕ್ಕಳಲ್ಲಿ ಜಂತುಹುಳ ಸಂಖ್ಯೆ ಹೆಚ್ಚಿದೆಯೋ, ಆ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತಿನ ಲಕ್ಷಣಗಳು ಕಂಡುಬರುತ್ತವೆ. ಜಂತುಹುಳ ಸಂಖ್ಯೆ ಕಡಿಮೆ ಇದ್ದವರಲ್ಲಿ ಯಾವುದೇ ತೊಂದರೆಗಳು ಕಾಣಿಸದಿರಬಹುದು.
ನಿವಾರಣೆಯ ಉಪಯೋಗ: ರಕ್ತ ಹೀನತೆಯನ್ನು ತಡೆಗಟ್ಟುವುದು, ಪೌಷ್ಠಿಕತೆ ಯಲ್ಲಿ ಸುಧಾರಣೆ, ರೋಗ ನಿರೋಧಕ ಶಕ್ತಿ ಹೆಚ್ಚುವುದು, ಹಾಜರಾತಿ, ಏಕಾಗ್ರತೆ, ಕಲಿಕೆಯಲ್ಲಿ ಆಸಕ್ತಿ ಮೂಡುವುದು.
ತಡೆಗಟ್ಟಲು ಪೂರಕ ಮಾಹಿತಿ: ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ ಶುಚಿಯಾಗಿಡಬೇಕು. ಊಟ/ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯವನ್ನು ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ತೊಳೆಯಬೇಕು, ಆಹಾರ ಪದಾರ್ಥಗಳನ್ನು ಮುಚ್ಚಿಡಬೇಕು, ಶುದ್ಧೀಕರಿಸಿದ ನೀರನ್ನೇ ಕುಡಿಯ ಬೇಕು, ಹಣ್ಣು, ಹಂಪಲು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಶುದ್ಧ ನೀರಿನಲ್ಲಿ ತೊಳೆಯಬೇಕು. ಪರಿಸರವನ್ನು ಸ್ವಚ್ಛವಾಗಿಡಬೇಕು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸಬೇಕು. ನಡೆಯುವಾಗ ಕಾಲಿೆ ಪಾದರಕ್ಷೆಗಳನ್ನು ಬಳಸಬೇಕು.
ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ ಶುಚಿಯಾಗಿಡಬೇಕು. ಊಟ/ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯವನ್ನು ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ತೊಳೆಯಬೇಕು, ಆಹಾರ ಪದಾರ್ಥಗಳನ್ನು ಮುಚ್ಚಿಡಬೇಕು, ಶುದ್ಧೀಕರಿಸಿದ ನೀರನ್ನೇ ಕುಡಿಯ ಬೇಕು, ಹಣ್ಣು, ಹಂಪಲು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಶುದ್ಧ ನೀರಿನಲ್ಲಿ ತೊಳೆಯಬೇಕು. ಪರಿಸರವನ್ನು ಸ್ವಚ್ಛವಾಗಿಡಬೇಕು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸಬೇಕು. ನಡೆಯುವಾಗ ಕಾಲಿಗೆ ಪಾದರಕ್ಷೆಗಳನ್ನು ಬಳಸಬೇಕು.