ವೀರಭದ್ರ ಸಿಂಗ್ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ

Update: 2019-02-06 16:42 GMT

 ಹೊಸದಿಲ್ಲಿ, ಫೆ.6: 10 ಕೋಟಿ ರೂ.ಗೂ ಹೆಚ್ಚಿನ ಆದಾಯ ಮೀರಿದ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ವಿರುದ್ಧ ಆರೋಪಪಟ್ಟಿ ದಾಖಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ದಿಲ್ಲಿ ಹೈಕೋರ್ಟ್ ನಿರಾಕರಿಸಿದೆ.

      ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪದಲ್ಲಿ ಸಿಂಗ್, ಅವರ ಪತ್ನಿ ಹಾಗೂ ಇತರ ಏಳು ಮಂದಿಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಪಟ್ಟಿ ದಾಖಲಿಸುವಂತೆ ವಿಚಾರಣಾ ನ್ಯಾಯಾಲಯ 2018ರ ಡಿಸೆಂಬರ್‌ನಲ್ಲಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹಾಗೂ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ 82 ವರ್ಷದ ವೀರಭದ್ರ ಸಿಂಗ್ ದಿಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹೈಕೋರ್ಟ್, ಸಿಂಗ್ ಮನವಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಎಪ್ರಿಲ್ 16ಕ್ಕೆ ನಿಗದಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News