×
Ad

ಮಾಜಿ ಸಿಎಂ ಎಸ್.ಎಂ.ಕೃಷ್ಣ ಗೆ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ಪ್ರಶಸ್ತಿ

Update: 2019-02-06 22:33 IST

ಬೆಂಗಳೂರು, ಫೆ.4 : ಕನ್ನಡ ಸಾಹಿತ್ಯ ಪರಿಷತ್ತಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ಪ್ರಶಸ್ತಿಯು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಹಾಗೂ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ ಎಚ್.ಬಿ.ಮದನಗೌಡ ಅವರಿಗೆ ಲಭಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 2018ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅಂತಿಮ ಮಾಡಲಾಗಿದ್ದು, ಪ್ರಶಸ್ತಿಯು 25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ.

ಇನ್ನು 2019ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ಎಚ್.ಬಿ.ಮದನಗೌಡರನ್ನು ಸಮಿತಿ ಆಯ್ಕೆ ಮಾಡಿದ್ದು, ಪ್ರಶಸ್ತಿಯು 10 ಸಾವಿರ ನಗದು ಮತ್ತು ಸ್ಮರಣಿಕೆಯನ್ನೊಳಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News