×
Ad

ಕೊಳೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2019-02-07 21:18 IST

ಮೈಸೂರು,ಫೆ.7: ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕುವೆಂಪು ನಗರದಲ್ಲಿ ನಡೆದಿದೆ.

ಮೃತರನ್ನು ದೀಪಕ್ (47) ಎಂದು ಗುರುತಿಸಲಾಗಿದ್ದು, ಅವರ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆಯದೇ ಇರುವುದನ್ನು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 

ನಗರದ ಧನ್ವಂತ್ರಿ ರಸ್ತೆಯಲ್ಲಿ ಮೊಬೈಲ್ ರಿಪೇರಿ ಮಾಡುತ್ತಿದ್ದ ಇವರು, ಹೃದಯಾಘಾತದಿಂದ ಸಾವನ್ನಪ್ಪಿರಬೇಕೆಂದು ಪೊಲೀಸರು ತಿಳಿಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕೊಂಡೊಯ್ಯಲಾಗಿದೆ.

ಈ ಸಂಬಂಧ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News