ಗೌರಿ ಹತ್ಯೆ ಪ್ರಕರಣ: ಅಮೋಲ್ ಕಾಳೆ ಸೇರಿ 16 ಆರೋಪಿಗಳ ಆದೇಶ ಕಾಯ್ದಿರಿಸಿದ ಕೋರ್ಟ್

Update: 2019-02-07 16:25 GMT

ಬೆಂಗಳೂರು, ಫೆ.7: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೋಲ್ ಕಾಳೆ ಸೇರಿ 16 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸಿಟಿ ಸಿವಿಲ್ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಇನ್ನು ಎಸ್‌ಐಟಿ ಪರ ವಕೀಲರಿಂದ ಆರೋಪಿಗಳ ಅರ್ಜಿಗೆ ಬಾಲನ್ ಆಕ್ಷೇಪಣೆ ಸಲ್ಲಿಸಿದರು. ಆಗ ಆರೋಪಿ ಪರ ವಕೀಲರು ಎಸ್‌ಐಟಿ ಅಧಿಕಾರಿಗಳು ನಿಗದಿತ ಅವಧಿಗೂ ಮುನ್ನವೇ ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಜಾರಿಗೊಳಿಸಲಾಗಿದೆ. ಹೀಗಾಗಿ ಜಾಮೀನು ನೀಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಈ ವೇಳೆ ಎಸ್‌ಐಟಿ ಪರ ವಕೀಲರು ಕೋಕಾ ಕಾಯ್ದೆ ಜಾರಿಗೊಳಿಸಿದ ನಂತರ ಕಡ್ಡಾಯ ಜಾಮೀನು ನೀಡಲು ಬರುವುದಿಲ್ಲ. ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿತು.

ಪತ್ರಕರ್ತೆ ಗೌರಿ ಲಂಕೇಶರನ್ನು 2017ರ ಸೆ.5ರಂದು ಈ ಆರೋಪಿಗಳು ಗೌರಿ ಮನೆಯ ಹತ್ತಿರ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಮುಖ್ಯಸ್ಥ ಬಿ.ಕೆ.ಸಿಂಗ್ ತನಿಖೆ ನಡೆಸಿ ದೋಷಾರೋಪ ಪಟ್ಟಿ ನ್ಯಾಯಲಯಕ್ಕೆ ಇತ್ತೀಚೆಗೆ ಸಲ್ಲಿಸಿದ್ದರು. ಅಮೋಲ್ ಕಾಳೆ, ಪರಶುರಾಮ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬದ್ದಿ ಸೇರಿ 17 ಆರೋಪಿಗಳ ಮೇಲೆ ದೋಷಾರೋಪಣ ಪಟ್ಟಿಯಲ್ಲಿ ಹೆಸರು ನಮೂದಿಸಲಾಗಿತ್ತು. ಈ ಆರೋಪಿಗಳು ಎಲ್ಲ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News