×
Ad

ಫೆ.8 ರಂದು ವಿಶೇಷ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2019-02-07 22:33 IST

ಬೆಂಗಳೂರು, ಫೆ. 7: 2019-20ನೆ ಸಾಲಿನ ಆಯವ್ಯಯ ಅಧಿವೇಶನ, ಬಜೆಟ್ ಅನುಮೋದನೆ ಕಲಾಪದ ವೇಳೆ ಎಲ್ಲ ಶಾಸಕರು ಹಾಜರಿರಬೇಕು. ಈ ಬಗ್ಗೆ ಚರ್ಚಿಸಲು ನಾಳೆ(ಫೆ.8) ಬೆಳಗ್ಗೆ 9ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ವಿಶೇಷ ಸಭೆ ಕರೆಯಲಾಗಿದೆ.

ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಬಿ. ಖಂಡ್ರೆ ಭಾಗವಹಿಸಲಿದ್ದಾರೆ.

ಅನರ್ಹತೆಗೆ ಶಿಫಾರಸ್ಸು: ಎಲ್ಲ ಶಾಸಕರು ಶಾಸಕಾಂಗ ಪಕ್ಷದ ವಿಶೇಷ ಸಭೆಗೆ ಹಾಜರಾಗಬೇಕು. ಇಲ್ಲವಾದರೆ ತಮ್ಮ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಕಾಂಗ್ರೆಸ್ ಸದಸ್ಯತ್ವವನ್ನು ಸ್ವ ಇಚ್ಛೆಯಿಂದ ಬಿಟ್ಟುಬಿಡಲು ಇಚ್ಛಿಸಿರುವಿರೆಂದು ಪರಿಗಣಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News