ದಲಿತ ಬಾಲಕಿಗೆ ಲೈಂಗಿಕ ಕಿರುಕುಳ, ಜಾತಿನಿಂದನೆ: ಓರ್ವ ಆರೋಪಿ ಬಂಧನ

Update: 2019-02-07 18:36 GMT

ವಿಜಯಪುರ,ಫೆ.7: ಜಿಲ್ಲೆಯ ಸಿಂದಗಿ ತಾಲೂಕಿನ ಖ್ಯೆನೂರ ಗ್ರಾಮದ ದಲಿತ ಹುಡುಗಿಯೊಬ್ಬಳಿಗೆ ಕಿರುಕುಳ ನೀಡಿ ಮಾನಹಾನಿಗೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯು ಶಾಲೆಗೆ ತೆರಳುವಾಗ ಹಾಗೂ ಮನೆಯ ಹತ್ತಿರ ಬಂದು ಆರೋಪಿಗಳು ತೊಂದರೆ ಕೊಡುತ್ತಿದ್ದರು. ಅಲ್ಲದೇ ಪ್ರತಿ ದಿನ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದೆ. ಆಕೆಯ ಕೈ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿನಿಂದನೆ ಮಾಡಿ, ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಂದಗಿ ಠಾಣೆಗೆ ಬಾಲಕಿಯ ತಾಯಿ ದೂರು ನೀಡಿದ್ದು, ಫೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. 

ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ 6 ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ತೀವ್ರ ಹುಡುಕಾಟದಲ್ಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News