ಉಡುಪಿ: ಜಂತುಹುಳು ನಾಶಕ ಜನ ಜಾಗೃತಿ ಜಾಥಾ
ಉಡುಪಿ, ಫೆ.8: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜಂತು ಹುಳು ನಾಶಕ ಜನ ಜಾಗೃತಿ ಜಾಥಾವನ್ನು ಇಂದು ನಗರದಲ್ಲಿ ಹಮ್ಮಿಕೊಳ್ಳ ಲಾಗಿತ್ತು.
ಜಾಥಾವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಡಾ. ವಿಜಯೇಂದ್ರ ವಸಂತ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಂತುಹುಳು ಹರಡುವುದು ಮತ್ತು ಅದರ ನಿವಾರಣೆ ಕ್ರಮದ ಬಗ್ಗೆ ಮಾಹಿತಿ ನೀಡಿದರು.
ಜಾಥಾವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಡಾ. ವಿಜಯೇಂದ್ರ ವಸಂತ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಂತುಹುಳು ಹರಡುವುದು ಮತ್ತು ಅದರ ನಿವಾರಣೆ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಉಡುಪಿ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಜಿಲ್ಲಾ ಕಾರ್ಯದರ್ಶಿ ಐ.ಕೆ.ಜಯಚಂದ್ರ ರಾವ್, ಜಿಲ್ಲಾ ಸಂಘಟಕ ನಿತಿನ್ ಅಮಿನ್ ಹಾಗೂ ಸುಮನ್ ಶೇಖರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಲ್ಲಾ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಮೇಶ ಅಂಬಾಡಿ ಸಂಘಟಿಸಿದರು. ವಿವಿಧ ಶಾಲೆಗಳಿಂದ 250 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.