ಯಡಿಯೂರಪ್ಪ ನಂತಹ ಭಂಡರು ಯಾರೂ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಫೆ.8: ಆಪರೇಷನ್ ಕಮಲಕ್ಕೆ ಮುಂದಾಗಿದ್ದ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಬಣ್ಣ ರಾಜ್ಯದ ಜನರ ಮುಂದೆ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಯಡಿಯೂರಪ್ಪ ನಂತಹ ಬಂಡರು ಯಾರು ಇಲ್ಲ, ಆಪರೇಷನ್ ಕಮಲಕ್ಕೆ ಮುಂದಾಗುತ್ತಿಲ್ಲ ಎಂದು ಹೇಳುತ್ತಿದ್ದರು. ಈಗ ಇವರ ಆಟ ಸಾಕ್ಷಿ ಸಮೇತ ಭಯಲಾಗಿದೆ. ಆಡಿಯೋ ಟೇಪ್ ಕುರಿತು ಮಿಮಿಕ್ರಿ ಎಂದು ಹೇಳಿರುವ ಇವರು ರಾಜ್ಯದ ಜನರ ಮುಂದೆ ನಗೆಪಾಟೀಲಿಗೆ ಒಳಗಾಗಿದ್ದಾರೆ. ಇವರು ಸುಳ್ಳು ಹೇಳುವ ಮೂಲಕ ಜನರ ಮುಂದೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರದ ಆಡಳಿತವನ್ನು ಸಹಿಸದ ಯಡಿಯೂರಪ್ಪ ಮತ್ತು ತಂಡದವರು ಮೊದಲಿನಿಂದಲೂ ಆಪರೇಷನ್ ಕಮಲಕ್ಕೆ ಕೈಹಾಕಿದ್ದಾರೆ. ಇಂದು ಸಾಕ್ಷಿ ಸಮೇತ ಸಿಕ್ಕಿಹಾಕಿಕೊಂಡಿದ್ದಾರೆ. ಆದರೂ ಈ ವಾಯ್ಸ್ ನಂದಲ್ಲ ಎಂದು ಹೇಳುವ ಮೂಲಕ ನಗೆಪಾಟೀಲಿಗೆ ಒಳಗಾಗಿದ್ದಾರೆ ಎಂದು ಹೇಳಿದರು.
ಒಳ್ಳೆಯ ಬಜೆಟ್
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಳ್ಳೆಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಸಿಎಂಕುಮಾರಸ್ವಾಮಿ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ. ಕಾಮನ್ ಮಿನಿಮಮ್ ಪ್ರೋಗ್ರಾಮ್ ಅಡಿಯಲ್ಲಿ ಬಜೆಟ್ ಮಂಡನೆಯಾಗಿದೆ. ಬಜೆಟ್‍ನ ಸಂಪೂರ್ಣ ಕಾಫಿಯನ್ನು ನಾನು ಓದಿಲ್ಲ, ಕೃಷಿಭಾಗ್ಯ, ಅನ್ನಭಾಗ್ಯ ಮತ್ತು ಕ್ಷೀರಭಾಗ್ಯದಂತಹ ಯೋಜನೆಗಳನ್ನು ಮುಂದುವರೆಸಿದ್ದಾರೆ ಎಂದು ತಿಳಿಸಿದರು.
ರೈತ ಬೆಳಕು ಮತ್ತು ಉಚಿತ ಬಸ್ ಪಾಸ್ ಯೋಜನೆಯನ್ನು ಬಜೆಟ್‍ನಲ್ಲಿ ಸೇರಿಸಲಾಗಿಲ್ಲ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಇದೇ ವೇಳೆ ಸಿದ್ದರಾಮಯ್ಯ ಹೇಳಿದರು.