ಫೆ.9 ರಂದು ಸಿದ್ದರಾಮಯ್ಯ ಹೊಸದಿಲ್ಲಿಗೆ
Update: 2019-02-08 21:52 IST
ಬೆಂಗಳೂರು, ಫೆ.8: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 7 ಗಂಟೆಗೆ ಹೊಸದಿಲ್ಲಿಗೆ ತೆರಳಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿರುವ ಈ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅಂದು ಸಂಜೆಯೇ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.