ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

Update: 2019-02-09 14:46 GMT

ಬೆಂಗಳೂರು, ಫೆ.9: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ದಿಢೀರ್ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಕೆಲವೆಡೆ ಮರ ಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇನ್ನೂ ಎರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಕಬ್ಬನ್‌ಪೇಟೆ, ಯುಬಿ ಸಿಟಿ, ಮಲ್ಲೇಶ್ವರಂ, ಲಾಲ್ ಬಾಗ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯಿತು. ನಗರದಲ್ಲಿ ಮತ್ತೆ ಎರೆಡು ದಿನ ತುಂತುರು ಮಳೆ, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಪರಿಣಾಮದಿಂದಾಗಿ ನಗರದ ಮೂರು ಕಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ಇದರಿಂದಾಗಿ ಕೆಲ ವಾಹನ ಸವಾರರು ಪರದಾಡುವಂತಾಯಿತು. ಹೊಸೂರು ಮಾರ್ಗದಲ್ಲಿ ಬಿದ್ದ ಮರದ ಕೊಂಬೆಗಳನ್ನು ಬಿಬಿಎಂಪಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ತೆರವುಗೊಳಿಸಿದರು. ಮಾಲ್ಡೀವ್ಸ್‌ನಿಂದ ಅರಬ್ಬೀ ಸಮುದ್ರದವರೆಗೆ ವಾಯುಭಾರ ಕಡಿಮೆಯಾಗಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೋಲಾರ, ಬೀದರ್, ಬೆಳಗಾವಿಯಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News