ಸರ್ವ ಜನಾಂಗದ ಕಲ್ಯಾಣಕಾರಿ ಬಜೆಟ್: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

Update: 2019-02-09 14:40 GMT

ಬೆಂಗಳೂರು, ಫೆ.9: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಸರ್ವ ಜನಾಂಗದ ಕಲ್ಯಾಣಕಾರಿ ಬಜೆಟ್ ಮಂಡಿಸಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ರೈತರ ಸಾಲವನ್ನು ಮನ್ನಾ ಮಾಡಿ ವಿವಿಧ ಕೃಷಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿ ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಜಿಲ್ಲೆಗಳಿಗೂ ವಿವಿಧ ಯೋಜನೆಗಳನ್ನು ನೀಡಿ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸುವ ಬಜೆಟ್ ಮಂಡಿಸಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News