×
Ad

ಟ್ಯಾಂಕರ್ ಹರಿದು ಮಹಿಳೆ ಸಾವು

Update: 2019-02-09 20:27 IST

ಬೆಂಗಳೂರು, ಫೆ.9: ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುವಾಗ ಟ್ಯಾಂಕರ್ ಲಾರಿ ಹರಿದು ಮೃತಪಟ್ಟಿರುವ ಘಟನೆ ಹೆಸರುಘಟ್ಟದಲ್ಲಿ ನಡೆದಿದೆ ಎನ್ನಲಾಗಿದೆ.

ಹೆಸರುಘಟ್ಟದ ಕೋಮಲಾ(41) ಮೃತಪಟ್ಟ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.

ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕೋಮಲಾ, ಶುಕ್ರವಾರ ಬೆಳಗ್ಗೆ 11:30ರ ವೇಳೆ ಕೆಲಸಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ, ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಟ್ಯಾಂಕರ್ ಚಾಲಕನನ್ನು ಬಂಧಿಸಿ, ಇಲ್ಲಿನ ಜಾಲಹಳ್ಳಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News