ಕಡೆಂಗೋಡ್ಲು ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ
ಉಡುಪಿ, ಫೆ.9: ನಾಡಿನ ಹಿರಿಯ ಕವಿ, ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ.
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನ ಕಳುಹಿಸಲು ಕೊನೆಯ ದಿನ ಫೆ.28 ಆಗಿದೆ. ಕಳುಹಿಸಬೇಕಾದ ವಿಳಾಸ: ಸಂಯೋಜಕರು, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂಜಿಎಂ ಕಾಲೇಜು ಆವರಣ, ಉಡುಪಿ -576102
ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000 ರೂ.ಗಳ ಒಂದು ವಾರ್ಷಿಕ ಬಹುಮಾನವನ್ನು ಕಡೆಂಗೋಡ್ಲು ನೆನಪಿನಲ್ಲಿ ನೀಡಲಾಗುತ್ತಿದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ನೀಡಲಾಗುವುದು.
ಮೂವರು ವಿಮರ್ಶಕರುಳ್ಳ ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿ ಹಾಗೂ ನಿಯಮಗಳಿಗೆ ಬ್ಲಾಗ್: https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ: ಮೊಬೈಲ್ ನಂ. :9480575783; ಕಚೇರಿ: 0820-2521159ನ್ನು ಸಂಪರ್ಕಿಸುವಂತೆ ಗೋವಿಂದ ಪೈ ಸಂಶೋಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ.