ಫೆ.10 ರಂದು ರಾಜ್ಯಕ್ಕೆ ಮೋದಿ ಭೇಟಿ: ಕಿಸಾನ್ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಗೆ ತಯಾರಿ

Update: 2019-02-09 16:48 GMT

ಬೆಂಗಳೂರು, ಫೆ.9: ಪ್ರಧಾನಿ ನರೇಂದ್ರ ಮೋದಿ ಫೆ.10 ರಂದು ಹುಬ್ಬಳ್ಳಿ ಭೇಟಿ ನೀಡಲಿರುವ ಹಿನ್ನೆಲೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ 17 ರೂಪಾಯಿ ಡಿಡಿ ರವಾನಿಸುವ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಚಿನ್ ಮೀಗಾ, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿ, ಹುಬ್ಬಳ್ಳಿ ಧಾರವಾಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ 17 ರೂ. ಗಳ ಡಿಡಿ ಅನ್ನು ನೀಡಲಾಗುವುದು ಎಂದು ತಿಳಿಸಿದರು.

ರೈತರ ಸಾಲಮನ್ನಾ ಮಾಡುವ ಬದಲು, ಕೇಂದ್ರದ ಮೋದಿ ಸರಕಾರ ರೈತರಿಗೆ ದಿನಕ್ಕೆ ಬರೀ 17 ರೂ. ನೀಡಲು ಹೊರಟಿದೆ. ಅಷ್ಟೇ ಅಲ್ಲದೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ರೈತರ ಹಣವನ್ನು ವಿಮೆ ಕಂಪೆನಿಗೆ ಲಾಭ ಮಾಡಲಾಗಿದೆ, ಅದೇ ರೀತಿ, ಕಳಸ ಬಂಡೂರಿ ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯ ಮಾಡಿರುವುದನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News