ಪಾಕ್: ದೇಗುಲದಲ್ಲಿ ನಡೆಯುತ್ತಿದ್ದ ಶಾಲೆ ಮುಚ್ಚಿ, ಪೂಜೆಗೆ ಅವಕಾಶ

Update: 2019-02-09 18:08 GMT

ಪೇಶಾವರ,ಫೆ.8: ಪುರಾತನ ಹಿಂದೂ ದೇವಾಲಯವೊಂದರಲ್ಲಿ ನಡೆಯುತ್ತಿದ್ದ ಪ್ರಾಥಮಿಕ ಶಾಲೆಯನ್ನು ಮುಚ್ಚುಗಡೆಗೊಳಿಸಿರುವ ಪಾಕಿಸ್ತಾನದ ಖೈಬರ್ ಪಖ್ತೂನ್‌ಖ್ವಾ ಪ್ರಾಂತ ಸರಕಾರವು ಅಲಿ, ಆ ಸ್ಥಳದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಪೂಜೆ ಸಲ್ಲಿಸಲು ಅವಕಾಶ ನೀಡುವ ಮೂಲಕ ಧಾರ್ಮಿಕ ಸಹಿಷ್ಣುತೆಯನ್ನು ಪ್ರದರ್ಶಿಸಿದೆ.

 ಮುಚ್ಚುಗಡೆಗೊಂಡಿರುವ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಿಗೆ ಆಸುಪಾಸಿನ ಶಾಲೆಗಳಲ್ಲಿ ಸೇರ್ಪಡೆಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹೇಳಿಕೆ ತಿಳಿಸಿದೆ. ಈ ದೇಗುಲವನ್ನು ಹಿಂದೂ ಸಮುದಾಯಕ್ಕೆ ಹಸ್ತಾಂತರಿಸಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮುಂದೆ ಹಿಂದೂ ಧರ್ಮೀಯರು ಈ ದೇಗುಲದಲ್ಲಿ ಪೂಜೆ, ಪುನಸ್ಕಾರಗಳನ್ನು ಸಲ್ಲಿಸಬಹುದೆಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News