ಸದನದಲ್ಲಿ ಸೋಮವಾರ ‘ಆಪರೇಷನ್ ಕಮಲ’ ಆಡಿಯೋ ಗದ್ದಲ

Update: 2019-02-10 14:21 GMT

ಬೆಂಗಳೂರು, ಫೆ. 10: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿರುವ ಆಪರೇಷನ್ ಕಮಲ ಆಡಿಯೋ ವಿಚಾರ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಗಳಿದ್ದು, ಆಡಳಿತ ಮತ್ತು ವಿಪಕ್ಷ ಬಿಜೆಪಿ ಸದಸ್ಯರ ನಡುವಿನ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಲಿದೆ.

ನಾಳೆ(ಫೆ.11) ಬೆಳಗ್ಗೆ 11ಗಂಟೆ ವಿಧಾನಸಭೆ ಕಲಾಪ ಆರಂಭವಾಗಲಿದ್ದು, ಪ್ರಶ್ನೋತ್ತರ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ, 2019-20ನೆ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ ಚರ್ಚೆ, ವಿಧೇಯಕಗಳ ಮಂಡನೆ ಸೇರಿದಂತೆ ಇನ್ನಿತರ ವಿಚಾರಗಳು ಕಾರ್ಯಕಲಾಪ ಪಟ್ಟಿಯಲ್ಲಿವೆ.

ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿರುವ ‘ಆಪರೇಷನ್ ಕಮಲ ಆಡಿಯೋ’ ಬಿಡುಗಡೆ ಕುರಿತು ಕಲಾಪದಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಿಡಿಯೋವೊಂದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುವುದಾಗಿ ಬಿಜೆಪಿ ಹೇಳಿದೆ.

‘ನನ್ನ ವಿರುದ್ಧ ಹಳೆಯ ವಿಡಿಯೋ ಬಿಡುಗಡೆ ಮಾಡುವುದಾಗಿ ಬಿಜೆಪಿ ಹೇಳಿದೆ. ಈ ವಿಷಯದ ಬಗ್ಗೆ ಹಿಂದೆಯೇ ಚರ್ಚೆಗೆ ನಾನೇ ಆಗ್ರಹಿಸಿದ್ದೆ. ಮತ್ತೆ ಹಳೆ ಸರಕು ತರುತ್ತಿದ್ದಾರೆ. ನಾನು ವಿಧಾನಸಭೆಯಲ್ಲಿ ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಪಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದೆ. ನಾಳೆ ವಿಧಾನಸಭೆ ಈ ವಿಚಾರದ ಚರ್ಚೆಗೆ ಹೇಗೆ ನಡೆಯಲಿದೆ, ಸ್ಪೀಕರ್ ಕೆ.ಆರ್. ರಮೇಶ್‌ಕುಮಾರ್, ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದ್ದಾರೆಂಬುದು ತೀವ್ರ ಕುತೂಹಲ ಸೃಷ್ಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News