×
Ad

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಾಸ್

Update: 2019-02-10 20:14 IST

ಬೆಂಗಳೂರು,ಫೆ.10: ಯಲಹಂಕದ ವಾಯುನೆಲೆಯಲ್ಲಿ ಫೆ.20ರಿಂದ 24ರವರೆಗೆ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಭಾಗವಹಿಸಲು ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಉಚಿತ ಪಾಸ್‌ಗಳು ನೀಡಲಾಗುತ್ತಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿರುವ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಉಚಿತ ಪಾಸ್ ನೀಡಲಾಗುತ್ತದೆ.

ವಿದ್ಯಾರ್ಥಿಗಳು ವೈಮಾನಿಕ ಪ್ರದರ್ಶನಕ್ಕೆ ಆಗಮಿಸಲು ಬೇಕಾದ ಸಾರಿಗೆ ವ್ಯವಸ್ಥೆಯನ್ನು ಕಾಲೇಜಿನಿಂದಲೇ ಮಾಡಿಕೊಳ್ಳಬೇಕಾಗುತ್ತದೆ. ಈ ಎಲ್ಲ ಜಿಲ್ಲೆಗಳ ಸರಕಾರಿ ಪದವಿ ಕಾಲೇಜಿನ ಸಂಬಂಧಪಟ್ಟ ಪ್ರಾಧ್ಯಾಪಕರು, ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಇಲಾಖೆಗೆ ವಿದ್ಯಾರ್ಥಿಗಳ ಹೆಸರನ್ನು ನೀಡಲು ಸೂಚಿಸಲಾಗಿತ್ತು.

ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವ ಕಾಲೇಜುಗಳಿಗೆ ಉಚಿತ ಪಾಸ್ ವಿತರಿಸಲಾಗುತ್ತದೆ. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News