ಬಾರೆಬೈಲ್: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

Update: 2019-02-11 05:20 GMT

ಮಂಗಳೂರು, ಫೆ.11: ನಗರದ ಬಾರೆಬೈಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಪೀಠೋಪಕರಣಗಳ ಸಹಿತ ಹಲವು ಸೊತ್ತುಗಳಿಗೆ ಹಾನಿಯಾದ ಘಟನೆ ರವಿವಾರ ಸಂಜೆ ನಡೆದಿದೆ.

ಬಾರೆಬೈಲಿನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ಐದನೇ ಮಹಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಮಹೇಶ್ ಎಂಬವರಿಗೆ ಸೇರಿದ ಈ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯು ಕೊಠಡಿಯೆಲ್ಲ ವ್ಯಾಪಿಸಿ ಪೀಠೋಪಕರಣಗಳಿಗೂ ಹಾನಿಯಾಗಿದೆ.

ಸುದ್ದಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕದ್ರಿ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News