ಶಕ್ತಿ ಕೋಚಿಂಗ್ ಅಕಾಡಮಿ ಉದ್ಘಾಟನೆ

Update: 2019-02-11 07:55 GMT

ಮಂಗಳೂರು, ಫೆ.11: ನಗರದ ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಸಮೀಪದ ಕ್ಲಾಸಿಕ್ ಪ್ರೈಡ್ ಕಟ್ಟಡದಲ್ಲಿ ಆರಂಭಗೊಂಡಿರುವ ‘ಶಕ್ತಿ ಕೋಚಿಂಗ್ ಅಕಾಡಮಿ’ಯನ್ನು ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಸೋಮವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ಹಬ್ ಆಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ‘ಶಕ್ತಿ ಕೋಚಿಂಗ್ ಅಕಾಡಮಿ’ಯನ್ನು ತೆರೆದಿರುವುದು ಶ್ಲಾಘನೀಯ. ಇದೀಗ ಗುಣಮಟ್ಟದ ಶಿಕ್ಷಣದೊಂದಿಗೆ ವೌಲಿಕ ಶಿಕ್ಷಣ ನೀಡುವ ಅನಿವಾರ್ಯತೆ ಇದೆ. ಇದು ಕೋಚಿಂಗ್ ನೀಡುವ ಸಂಸ್ಥೆಯಾಗದೆ ಇಂಡಿಯನ್ ಮಿಲಿಟರಿ ಸೇವೆಯ ಆಯ್ಕೆಗೆ ತರಬೇತಿ ನೀಡುವ ಸಂಸ್ಥೆಯಾಗಿಯೂ ಬೆಳೆಯಲಿ ಎಂದು ಹಾರೈಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಸಿ.ನಾಯ್ಕೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಗಿ ಮೇಯರ್ ಭಾಸ್ಕರ್ ಕೆ., ಮನಪಾ ಸದಸ್ಯೆ ಸಬಿತಾ ಮಿಸ್ಕಿತ್, ದ.ಕ. ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಕೆ.ಉಪಾಧ್ಯಾಯ ಭಾಗವಹಿಸಿದ್ದರು. ಸಂಸ್ಥೆಯ ಟ್ರಸ್ಟಿಗಳಾದ ಸಗುಣ ನಾಯ್ಕಿ, ಮುರಳೀಧರ ನಾಯ್ಕಿ ಮತ್ತಿತರರು ಪಾಲ್ಗೊಂಡಿದ್ದರು.

ಟ್ರಸ್ಟಿ ಸಂಜಿತ್ ನಾಯ್ಕಿ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಸುಧೀರ್ ಎಂ.ಕೆ. ಪ್ರಾಸ್ತಾವಿಸಿದರು. ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅತಿಥಿಗಳನ್ನು ಪರಿಚಯಿಸಿದರು. ಡಾ. ದರ್ಶನ್ ರಾಜ್ ವಂದಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News