ಸುಡಾನ್ ಹಿಂಸೆಯ ಬಗ್ಗೆ ತನಿಖೆಗೆ ‘ಹ್ಯೂಮನ್ ರೈಟ್ಸ್ ವಾಚ್’ ಒತ್ತಾಯ

Update: 2019-02-11 15:59 GMT

ಕೈರೋ (ಈಜಿಪ್ಟ್), ಫೆ. 11: ಸುಡಾನ್ ನಲ್ಲಿ ಸರಕಾರ ವಿರೋಧಿ ಪ್ರತಿಭಟನಕಾರರ ಮೇಲೆ ನಡೆಯಿತೆನ್ನಲಾದ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಅಂತಾರಾಷ್ಟ್ರೀಯ ಮಾನವಹಕ್ಕುಗಳ ಸಂಘಟನೆ ‘ಹ್ಯೂಮನ್ ರೈಟ್ಸ್ ವಾಚ್’ ವಿಶ್ವಸಂಸ್ಥೆಯನ್ನು ಒತ್ತಾಯಿಸಿದೆ.

ಸುಡಾನ್‌ನಲ್ಲಿ ಡಿಸೆಂಬರ್ 19ರಿಂದ ರಾಷ್ಟ್ರವ್ಯಾಪಿ ಸರಕಾರ ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ.

ಅಗತ್ಯವಸ್ತುಗಳ ಬೆಲೆಯೇರಿಕೆ ಮತ್ತು ಪೂರೈಕೆ ಕೊರತೆಯನ್ನು ವಿರೋಧಿಸಿ ಆರಂಭವಾದ ಪ್ರತಿಭಟನೆಯು ಬಳಿಕ, ಅಧ್ಯಕ್ಷ ಅಧ್ಯಕ್ಷ ಉಮರ್ ಅಲ್-ಬಶೀರ್ ವಿರುದ್ಧದ ಪ್ರತಿಭಟನೆಯಾಗಿ ಪರಿವರ್ತನೆಗೊಂಡಿರುವುದನ್ನು ಸ್ಮರಿಸಬಹುದಾಗಿದೆ.

ಪ್ರತಿಭಟನೆಗಳಲ್ಲಿ ಈವರೆಗೆ ಕನಿಷ್ಠ 57 ಮಂದಿ ಮೃತಪಟ್ಟಿದ್ದಾರೆ.

ಸುಡಾನ್‌ನಲ್ಲಿ ನೆಲೆಸಿರುವ ಮಾನವೀಯ ಬಿಕ್ಕಟ್ಟಿಗೆ ಮಾರ್ಚ್ ಅಧಿವೇಶನದಲ್ಲಿ ಪ್ರತಿಕ್ರಿಯಿಸುವಂತೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯನ್ನು ಹ್ಯೂಮನ್ ರೈಟ್ಸ್ ವಾಚ್ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News