×
Ad

ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಕೆ.ಎ.ಯಾಕುಬ್ ನೇಮಕ

Update: 2019-02-12 18:29 IST

ಮಡಿಕೇರಿ, ಫೆ.12: ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಕೆ.ಎ.ಯಾಕುಬ್ ಅವರು ನೇಮಕಗೊಂಡಿದ್ದಾರೆ. ವಕ್ಫ್ ಸಚಿವ ಝಮೀರ್ ಅಹ್ಮದ್ ಅವರು ಯಾಕುಬ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರಿಂದ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿದ ಯಾಕುಬ್ ಅವರು, ಮುಂದಿನ ಮೂರು ವರ್ಷಗಳ ಅಧಿಕಾರವಧಿಯಲ್ಲಿ ವಕ್ಫ್ ವ್ಯಾಪ್ತಿಯ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಭರವಸೆ ನೀಡಿದರು. ಸರಕಾರದ ಎಲ್ಲಾ ಸೌಲಭ್ಯಗಳು ಅರ್ಹರಿಗೆ ದೊರಕುವಂತೆ ಪಾರದರ್ಶಕವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News