'ಆಪರೇಷನ್' ಆಡಿಯೋ ಪ್ರಕರಣ: ಯಡಿಯೂರಪ್ಪ ವಿರುದ್ಧ ಸಿಸಿಬಿಗೆ ದೂರು

Update: 2019-02-12 14:19 GMT

ಬೆಂಗಳೂರು, ಫೆ.12: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಅವರಿಗೆ ದೂರು ನೀಡಲಾಗಿದೆ.

ಮಂಗಳವಾರ ಬೆಂಗಳೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದು, ಸಂವಿಧಾನಾತ್ಮಕವಾಗಿ ರಚನೆಯಾಗಿರುವ ಸರಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರು ದೇಶದ ಪ್ರಧಾನಿ ಹೆಸರು ಬಳಸಿರುವುದು ಖಂಡನೀಯ. ಆಡಿಯೊದಲ್ಲಿ ಕೋಟ್ಯಂತರ ರೂಪಾಯಿಗಳ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದು, ಈ ಹಣದ ಮೂಲ ಹಾಗೂ ಆಡಿಯೊ ಸತ್ಯಾಸತ್ಯತೆ ಬಯಲಾಗಬೇಕು ಎಂದು ಮನವಿ ಮಾಡಿದರು.

ಯಡಿಯೂರಪ್ಪ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ದೂರು ನೀಡಲು ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶಿವಕುಮಾರ್ ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News