×
Ad

ಉಡುಪಿ ಜಿಲ್ಲೆಯ ಸಮಸ್ಯಾತ್ಮಕ ಮತಗಟ್ಟೆಗಳ ವಿವರ ನೀಡಿ: ಜಿಲ್ಲಾಧಿಕಾರಿ

Update: 2019-02-12 21:00 IST

ಉಡುಪಿ, ಫೆ.12: ಜಿಲ್ಲೆಯಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನವಾದ, ಮತದಾರರಿಗೆ ಬೆದರಿಕೆ ಉಂಟು ಮಾಡುವ, ಮತದಾನ ಕೇಂದ್ರಗಳಿಗೆ ಮತದಾರರು ಬರಲು ಹೆದರುವ ಮತಗಟ್ಟೆಗಳ ಕುರಿತು 4 ದಿನದಲ್ಲಿ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಜಿಲ್ಲೆಯ ಸೆಕ್ಟರ್‌ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಯಾವುದೇ ಅಡೆತಡೆಗಳಿದ್ದರೆ ಕೂಡಲೇ ತನ್ನ ಗಮನಕ್ಕೆ ತರುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮತದಾರರಿಗೆ ಬೆದರಿಕೆ ಉಂಟು ಮಾಡುವ ವಾತಾವರಣ ನಿರ್ಮಿಸುವ ವ್ಯಕ್ತಿಗಳ ಬಗ್ಗೆ ಮತ್ತು ಕಳೆದ ಬಾರಿ ಅತೀ ಕಡಿಮೆ ಮತದಾನವಾದ ಮತಗಟ್ಟೆಗಳ ಬಳಿ ತೆರಳಿ ಅಲ್ಲಿನ ನೈಜ ಪರಿಸ್ಥಿತಿಯ ವರದಿ ನೀಡುವಂತೆ ಅವರು ಸೂಚಿಸಿದರು.

ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಯಾವುದೇ ಅಡೆತಡೆಗಳಿದ್ದರೆ ಕೂಡಲೇ ತನ್ನ ಗಮನಕ್ಕೆ ತರುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮತದಾರರಿಗೆ ಬೆದರಿಕೆ ಉಂಟು ಮಾಡುವ ವಾತಾವರಣ ನಿರ್ಮಿಸುವ ವ್ಯಕ್ತಿಗಳ ಬಗ್ಗೆ ಮತ್ತು ಕಳೆದ ಬಾರಿ ಅತೀ ಕಡಿಮೆ ಮತದಾನವಾದ ಮತಗಟ್ಟೆಗಳ ಬಳಿ ತೆರಳಿ ಅಲ್ಲಿನ ನೈಜ ಪರಿಸ್ಥಿತಿಯ ವರದಿ ನೀಡುವಂತೆ ಅವರು ಸೂಚಿಸಿದರು.

ಜಿಲ್ಲೆಯ ಯಾವುದೇ ಮತಗಟ್ಟೆಯಲ್ಲಿ ಒಬ್ಬನೇ ವ್ಯಕ್ತಿಗೆ ಶೇ.75ಕ್ಕಿಂತಲೂ ಹೆಚ್ಚು ಮತದಾನವಾಗಿರುವ ಪ್ರದೇಶದಲ್ಲಿ ಮತದಾರರಿಗೆ ಯಾವುದೇ ಭಯ ಅಥವಾ ಹೆಚ್ಚಿನ ಆಮಿಷ ನೀಡಿರುವ ಕುರಿತು ಹಾಗೂ ಮತದಾನ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳ ನಡೆದಿದ್ದರೆ ಅವುಗಳ ನೈಜ ವರದಿ ನೀಡಿ. ಸ್ಥಳೀಯ ಬಿಎಲ್‌ಓಗಳು, ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿ ಗಳು ಇವುಗಳನ್ನು ಸಂಯುಕ್ತವಾಗಿ ಪರಿಶೀಲಿಸಿ ಫೆ.16ರೊಳಗೆ ತನಗೆ ವರದಿ ನೀಡುವಂತೆ ಸೂಚಿಸಿದರು.

ಚುನಾವಣೆಯ ಕರ್ತವ್ಯದಲ್ಲಿ ಪ್ರತಿಯೊಬ್ಬರೂ ತಮಗೆ ವಹಿಸಲಾದ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕಾರ್ಯ ನಿರ್ವಹಿುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಚುನಾವಣೆಯ ಕರ್ತವ್ಯದಲ್ಲಿ ಪ್ರತಿಯೊಬ್ಬರೂ ತಮಗೆ ವಹಿಸಲಾದ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಲೋಕಸಭಾ ಚುನಾವಣೆಗಾಗಿ 92 ಜನ ಸೆಕ್ಟರ್ ಅಧಿಕಾರಿಗಳು ಮತ್ತು 132 ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಎಎಸ್ಪಿಕುಮಾರಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ ಹಾಗೂ ಎಲ್ಲಾ ತಾಲೂಕು ಗಳ ತಹಶೀಲ್ದಾರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News