×
Ad

ಹಿರಿಯ ನಾಗರಿಕರಿಗೆ ಆನ್‌ಲೈನ್ ಮೂಲಕ ಗುರುತಿನ ಚೀಟಿ

Update: 2019-02-12 21:10 IST

ಉಡುಪಿ, ಫೆ.12: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ತಾಲೂಕು ಹಿರಿಯ ನಾಗರಿಕರ ಸಂಸ್ಥೆಗಳ ಮೂಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಇಲಾಖೆ ಮಾರ್ಗಸೂಚಿಯಂತೆ ಸೇವಾಸಿಂಧು (https://serviceonline.gov.in/karnataka) ವೆಬ್‌ಸೈಟ್‌ನಲ್ಲಿ ಅಥವಾ ಸಿಎಸ್‌ಸಿ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 40 ರೂ. ಮಾತ್ರ ಪಾವತಿಸಬೇಕಾಗಿದೆ. ಸೇವಾ ಕೇಂದ್ರಗಳ (ಸಿಎಸ್‌ಸಿ) ಬಗ್ಗೆ ಮಾಹಿತಿಗಳನ್ನು ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ.

ಗುರುತಿನ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ (ಮೊಬೈಲ್ ನಂಬರ್ ಸೇರ್ಪಡೆಯಾಗಿರಬೇಕು), ರಕ್ತದ ಗುಂಪು ವರ್ಗೀಕರಣದ ವರದಿ, ಪ್ರಸ್ತುತ ವಿಳಾಸದ ಪುರಾವೆ ಬಗ್ಗೆ ದಾಖಲೆ (ಆಧಾರ್ ಕಾರ್ಡ್, ವೋಟರ್‌ಕಾರ್ಡ್), ಪಾಸ್‌ಪೋರ್ಟ್ ಅಳತೆ ಭಾವಚಿತ್ರವನ್ನು ಅರ್ಜಿಯ ಜೊತೆಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News