ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಕೀಲರಿಂದ ಧರಣಿ

Update: 2019-02-12 17:26 GMT

ಮೈಸೂರು,ಫೆ.12: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಕೀಲರು ಮೈಸೂರಿನಲ್ಲಿಂದು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಬಾರ್ ಕೌನ್ಸಿಲ್ ಇಂಡಿಯಾ ಕರೆ ಹಿನ್ನೆಲೆಯಲ್ಲಿ ಮಂಗಳವಾರ ಕಲಾಪ ಬಹಿಷ್ಕರಿಸಿದ್ದು, ವಕೀಲರ ಮತ್ತು ಕಕ್ಷಿದಾರರ ಹಿತ ಕಾಯುವಲ್ಲಿ ಸರ್ಕಾರ ವಿಫಲ ಎಂದು ಆರೋಪಿಸಿದ್ದಾರೆ. ಬಜೆಟ್ ನಲ್ಲಿ ಅನುದಾನ ಮತ್ತು ಸೌಲಭ್ಯ ಘೋಷಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಕೀಲರು, ಮೈಸೂರಿನ ನ್ಯಾಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿದರು. ಸಂಘದ ಮತ್ತು ಕಕ್ಷಿದಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರಲ್ಲದೇ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್, ಕಾರ್ಯದರ್ಶಿ ಶಿವಣ್ಣ, ಶಿವಣ್ಣೇಗೌಡ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News