×
Ad

ನಿರ್ಮಾಪಕಿ ಜಯಶ್ರೀದೇವಿ ನಿಧನ

Update: 2019-02-13 18:41 IST

ಬೆಂಗಳೂರು, ಫೆ.13: ಕನ್ನಡ ಹಾಗೂ ತೆಲುಗು ಚಿತ್ರರಂಗದ ನಿರ್ಮಾಪಕಿ ಜಯಶ್ರೀದೇವಿ(60) ಬುಧವಾರ ಬೆಳಗ್ಗೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಂದು ಬೆಳಗ್ಗೆ ಹೃದಯಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ದೃಢಪಡಿಸಿವೆ.

ಜಯಶ್ರೀದೇವಿಯವರು ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ, ಶ್ರೀಮಂಜುನಾಥ, ನಿಶ್ಯಬ್ದ, ಹಬ್ಬ, ಸ್ನೇಹ ಲೋಕ, ಕೋಣ ಈದೈತೆ ಚಿತ್ರಗಳನ್ನು ನಿರ್ಮಿಸಿದ್ದರು. ಹಾಗೂ ಇತ್ತೀಚೆಗೆ ಬಿಡುಗಡೆಯಾದ ಮುಕುಂದ ಮುರಾರಿ ಚಿತ್ರದ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಸ್ಟಾರ್ ನಟರ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಹೊತ್ತಿದ್ದರು. ಹಲವು ಸದಭಿರುಚಿ ಸಿನೆಮಾಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿದ ಜಯಶ್ರೀದೇವಿ ಅವರ ಅಗಲಿಕೆಯಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವೆಂದು ಚಿತ್ರರಂಗದ ಹಿರಿಯರು ಕಂಬನಿ ಮಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News