ಗಾಂಜಾ ಮಾರಾಟ: ಇಬ್ಬರು ವಿದ್ಯಾರ್ಥಿಗಳ ಬಂಧನ

Update: 2019-02-13 13:18 GMT

ಬೆಂಗಳೂರು, ಫೆ.13: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ವಿದ್ಯಾರ್ಥಿಗಳನ್ನು ಇಲ್ಲಿನ ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಾಶಸ್ವಿಯಾಗಿದ್ದಾರೆ.

ಬಂಧಿತರನ್ನು ಜುನೈದ್ ಅಹ್ಮದ್, ನೀಲಕಂಠನ್ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಸುದ್ದಗುಂಟೆ ಪಾಳ್ಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಜುನೈದ್ ಅಹ್ಮದ್, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಂಧನವಾಗಿ ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆ ಆಗಿದ್ದ ಎನ್ನಲಾಗಿದೆ.

ನಂತರವೂ ಹಳೇ ಚಾಳಿ ಮುಂದುವರೆಸಿ ಆಂಧ್ರಪ್ರದೇಶದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನುವ ಮಾಹಿತಿ ಬೆಳಕಿಗೆ ಬಂದಿದ್ದು, ಇವರಿಂದ ಲಕ್ಷಾಂತರ ರೂಪಾಯಿ ವೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News