ಕಾಂಗ್ರೆಸ್ ಸಹ ಸದಸ್ಯರಾಗಿ ಪಕ್ಷೇತರ ಶಾಸಕ ನಾಗೇಶ್ ಪತ್ರ
Update: 2019-02-13 21:34 IST
ಬೆಂಗಳೂರು, ಫೆ. 14: ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ದಿಢೀರ್ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ಹಿಂದೆ ಮೈತ್ರಿ ಸರಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆಯುವುದಾಗಿ ಪ್ರಕಟಿಸಿದ್ದ ನಾಗೇಶ್, ಬಿಜೆಪಿಗೆ ತನ್ನ ಬೆಂಬಲವನ್ನು ಘೋಷಿಸಿದ್ದರು. ಆದರೆ, ಇದೀಗ ಅವರು ಕಾಂಗ್ರೆಸ್ ಸಹ ಸದಸ್ಯರಾಗಿರುವುದಾಗಿ ನಾಗೇಶ್ ಅವರು ಸಿದ್ದರಾಮಯ್ಯನವರಿಗೆ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿಕುಮಾರ್ ಹಾಜರಿದ್ದರು.