×
Ad

ಕರ್ನಾಟಕ ಭವನದ ದುರಸ್ತಿಗೆ ಹೆಚ್ಚಿನ ಅನುದಾನ: ಸಚಿವ ಪಿ.ಟಿ.ಪರಮೇಶ್ವರ ನಾಯ್ಕ

Update: 2019-02-13 22:51 IST

ಬೆಂಗಳೂರು, ಫೆ.13: ಆಂಧ್ರಪ್ರದೇಶದ ತಿರುಪತಿಯಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಭವನದ ದುರಸ್ತಿಗೆ ಅನುದಾನ ನೀಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ ಎಂದು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಿಂದ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದಾರೆ. ಹೀಗಾಗಿ, ರಾಜ್ಯ ಸರಕಾರವೂ ಈಗಾಗಲೇ ಕರ್ನಾಟಕ ಭವನದಲ್ಲಿರುವ 90 ಕೊಠಡಿಗಳ ಪೈಕಿ 60 ಕೊಠಡಿಗಳನ್ನು ದುರಸ್ತಿಗೊಳಿಸಿ ಎಸಿ ಅಳವಡಿಸಲಾಗಿದೆ. ಉಳಿದ ಕೊಠಿಡಿಗಳನ್ನೂ ದುರಸ್ತಿಗೊಳಿಸಿ ಭಕ್ತಾದಿಗಳ ವಾಸಕ್ಕೆ ಅನುಕೂಲ ಮಾಡಿಕೊಡಲಾಗುವುದು. ಅಲ್ಲದೆ, ಸಿಎಂ ಕುಮಾರಸ್ವಾಮಿ ಅವರು ಕರ್ನಾಟಕ ಭವನಕ್ಕೆ ಮತ್ತಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ತಿರುಪತಿ ದೇವಸ್ಥಾನದಲ್ಲಿರುವ ಕರ್ನಾಟಕ ಭವನದಲ್ಲಿಯಿರುವ ಕೊಠಡಿಗಳು ಉತ್ತಮವಾಗಿಲ್ಲ ಎಂದು ಜೆಡಿಎಸ್ ಸದಸ್ಯ ಎಸ್.ಎಲ್.ಬೋಜೆಗೌಡ, ಕಾಂಗ್ರೆಸ್ ಸದಸ್ಯ ಎಚ್.ಎಂ.ರೇವಣ್ಣ, ಶರಣಪ್ಪ ಮಟ್ಟೂರು ಕೂ ಸಚಿವರ ಗಮನಕ್ಕೆ ತಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News