ಕೆ.ಸಿ.ರೋಡ್: ಯುವತಿ ನೇಣು ಬಿಗಿದು ಆತ್ಮಹತ್ಯೆ

Update: 2019-02-13 17:37 GMT

ಉಳ್ಳಾಲ, ಫೆ. 13: ಉಳ್ಳಾಲ ಠಾಣೆ ವ್ಯಾಪ್ತಿಯ ತಲಪಾಡಿ ಸಮೀಪದ ಕೆ.ಸಿರೋಡ್ ಎಂಬಲ್ಲಿ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಆತ್ಮಹತ್ಯೆಗೈದ ಯುವತಿಯನ್ನು ದಿಲ್ಲಿ ಮೂಲದ ರೇಷ್ಮ (17) ಎಂದು ಗುರುತಿಸಲಾಗಿದೆ.

ಈಕೆ ಕೆ.ಸಿ.ರೋಡ್‍ನ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದಳು ಎನ್ನಲಾಗಿದೆ. ಉದ್ಯಮಿ ವಿದೇಶದಲ್ಲಿದ್ದು ಅವರ ಚಿಕ್ಕಪ್ಪನ ಮಗ ಹಾಗೂ ಕುಟುಂಬ ಆ ಮನೆಯಲ್ಲಿ ವಾಸವಾಗಿತ್ತು. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News