ಮಂಗಳೂರು: ಫೆ.15ರಂದು ಉದ್ಯೋಗ ಮೇಳ
Update: 2019-02-13 23:09 IST
ಮಂಗಳೂರು, ಫೆ.13: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಮಹಾನಗರ ಪಾಲಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಫೆ.15ರಂದು ಪೂವಾಹ್ನ 10 ಗಂಟೆಗೆ ನಗರದ ಕದ್ರಿಹಿಲ್ಸ್ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು. ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂ.ಸಂ.: 0824- 2457139ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳ ಪ್ರಕಟನೆ ತಿಳಿಸಿದೆ.