ಪ್ರೇಮಿಗಳ ದಿನ; ಮಂಗಳೂರಲ್ಲಿ ಪೊಲೀಸ್ ಬಂದೋಬಸ್ತ್
Update: 2019-02-13 23:14 IST
ಮಂಗಳೂರು, ಫೆ.13: ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಶನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಇಬ್ಬರು ಡಿಸಿಪಿ, ನಾಲ್ವರು ಎಸಿಪಿ, 16 ಪೊಲೀಸ್ ಇನ್‌ಸ್ಪೆಕ್ಟರ್, 16 ಪಿಎಸ್ಸೈ, 450 ಪೊಲೀಸ್ ಸಿಬ್ಬಂದಿ, ಎರಡು ಕೆಎಸ್‌ಆರ್‌ಪಿ ತುಕಡಿ ಹಾಗೂ ಆರು ಸಿಎಆರ್ ತಂಡಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ತಿಳಿಸಿದ್ದಾರೆ.