ವೆಲೆನ್ಸಿಯಾ: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
Update: 2019-02-13 23:27 IST
ಮಂಗಳೂರು, ಫೆ.13: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ನಗರದ ವೆಲೆನ್ಸಿಯಾ ಬಳಿ ಪೊಲೀಸರು ಬಂಧಿಸಿದ್ದಾರೆ.
ವೆಲೆನ್ಸಿಯಾ ಉಜ್ಜೋಡಿ ನಿವಾಸಿ ಪ್ರೀತಂ ಜೆ.(31) ಬಂಧಿತ ಆರೋಪಿ.
ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ನ್ನು ವಶಪಡಿಸಿದ್ದು, ವಶಪಡಿಸಿದ ಎಲ್ಲ ಸೊತ್ತುಗಳ ಒಟ್ಟು ಮೌಲ್ಯ 90,220 ರೂ. ಎಂದು ಅಂದಾಜಿಸಲಾಗಿದೆ.
ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಮ ಮತ್ತು ಉಪ-ನಿರೀಕ್ಷಕ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.