×
Ad

​ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ‌ರಾಗಿ ಅಶೋಕ್ ಕೊಡವೂರು

Update: 2019-02-13 23:38 IST
ಅಶೋಕ್ ಕೊಡವೂರು

ಉಡುಪಿ, ಫೆ.13: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡವೂರು ಅವರನ್ನು ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೇಮಿಸಿದ್ದಾರೆ.

ಈ ಕುರಿತು ಸಲ್ಲಿಸಲಾದ ಪ್ರಸ್ತಾಪ‌ಕ್ಕೆ ರಾಹುಲ್ ಗಾಂಧಿ ಅವರು ತನ್ನ ಅನುಮೋದನೆಯನ್ನು ನೀಡಿದ್ದಾರೆ ಎಂದು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕ್ ಕುಮಾರ್ ಕೊಡವೂರು ಕಳೆದ ಹಲವು ವರ್ಷ‌ಗಳಿಂದ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ‌ರಾಗಿದ್ದಾರೆ.

ಇದೇ ವೇಳೆ ಕೊಡಗು ಜಿಲ್ಲಾ ಕಾಂಗ್ರೆಸ್ ನ ನೂತನ ಅದ್ಯಕ್ಷರಾಗಿ ಕೆ. ಮಂಜುನಾಥ್ ರನ್ನು ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News