ಹನೂರು: ತಹಶೀಲ್ದಾರ್ ಆಗಿ ಜಿ.ಹೆಚ್.ನಾಗರಾಜು ಅಧಿಕಾರ ಸ್ವೀಕಾರ

Update: 2019-02-13 18:32 GMT

ಹನೂರು,ಫೆ.13: ಹನೂರು ತಾಲೂಕು ತಹಶೀಲ್ದಾರ್ ಆಗಿ ಜಿ.ಹೆಚ್.ನಾಗರಾಜು ಬುಧವಾರ ಅಧಿಕಾರ ಸ್ವೀಕರಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿಶೇಷ ತಹಶೀಲ್ದಾರ್ ಕೆ ಶಿವರಾಮ್ ನೂತನ ತಹಶೀಲ್ದಾರ್ ಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಹಿಂದೆ ತುರುವೆಕೆರೆ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಸರ್ಕಾರ ಹನೂರು ತಾಲೂಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಅಧಿಕಾರಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ನೇರವಾಗಿ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ನನ್ನ ಬಳಿಗೆ ಬಂದು ತಿಳಿಸಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಹೇಳಿದರು.

ನಂತರ ವಿಶೇಷ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ ಶಿವರಾಮುರವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಸುರೇಖಾ, ಆರ್.ಐ ಮಾದೇಶ್, ಗ್ರಾಮ ಲೆಕ್ಕಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News