ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜಭವನಕ್ಕೆ ಪಾದಯಾತ್ರೆ, ರಾಜ್ಯಪಾಲರಿಗೆ ಮನವಿ ಸಲ್ಲಿಕೆ

Update: 2019-02-14 12:34 GMT

ಬೆಂಗಳೂರು, ಫೆ. 14: ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲಿನ ಕಲ್ಲು ತೂರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡುತ್ತಿದ್ದು, ಇದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಗುರುವಾರ ಯಡಿಯೂರಪ್ಪನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆಯಲ್ಲಿ ತೆರಳಿ, ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಬಿಎಸ್‌ವೈ, ನಮ್ಮ ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದರ ವಿರುದ್ಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪ್ರಕರಣದ ಮಾಹಿತಿ ನೀಡಲಾಗಿದೆ ಎಂದರು.

ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಜಾಮೀನು ರಹಿತ ಸಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರೀತಂಗೌಡ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನಿಯೋಗದಲ್ಲಿ ಬಿಜೆಪಿ ಮುಖಂಡರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಹರತಾಳು ಹಾಲಪ್ಪ, ಮಾಧುಸ್ವಾಮಿ, ಆರ್. ಅಶೋಕ್, ವಿಶ್ವೇಶ್ವರ ಹೆಗಡೆ ಕಾಗೇರಿ, ರೇಣುಕಾಚಾರ್ಯ, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News