ಕೊಡಗು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕುಮಾರ್ ನೇಮಕ

Update: 2019-02-14 12:27 GMT

ಮಡಿಕೇರಿ, ಫೆ.14: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಕೆ.ಮಂಜುನಾಥ ಕುಮಾರ್ ನೇಮಕಗೊಂಡಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಇವರು ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡು ಬಾರಿ ಸ್ಪರ್ಧಿಸಿದ್ದರು. ಶಿವುಮಾದಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿರುವ ಹೈಕಮಾಂಡ್ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಜವಬ್ದಾರಿ ನೀಡಿದೆ. ಆ ಮೂಲಕ  ಜಿಲ್ಲಾ ಕಾಂಗ್ರೆಸ್‍ಗೆ ಪ್ರಥಮ ಬಾರಿಗೆ ಒಕ್ಕಲಿಗ ಸಮುದಾಯದವರೊಬ್ಬರು ಅಧ್ಯಕ್ಷರಾದಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News