ಶಾಸಕ ಪ್ರೀತಂ ಗೌಡರ ಮನೆ ಮೇಲೆ ದಾಳಿ : ಬಿಜೆಪಿ ಪ್ರತಿಭಟನೆ

Update: 2019-02-14 12:58 GMT

ಮಂಗಳೂರು: ಹಾಸನ ಶಾಸಕ ಪ್ರೀತಂ ಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಬುಧವಾರ ನಡೆಸಿದ ದಾಳಿಯನ್ನು ಖಂಡಿಸಿ ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ ಮಿಜಾರ್, ಮಾಜಿ ಕಾರ್ಪೊರೇಟರ್ ಭಾಸ್ಕರಚಂದ್ರ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News