ವಿಧಾನ ಪರಿಷತ್‌ನಲ್ಲಿ 8 ವಿಧೇಯಕ ಅಂಗೀಕಾರ

Update: 2019-02-14 13:24 GMT

ಬೆಂಗಳೂರು, ಫೆ.14: ಬಿಜೆಪಿ ಸದಸ್ಯರ ಧರಣಿ-ಗದ್ದಲದ ನಡುವೆಯೇ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು(ತಿದ್ದುಪಡಿ) ಸೇರಿದಂತೆ ಎಂಟು ವಿಧೇಯಕಗಳಿಗೆ ಯಾವುದೇ ಚರ್ಚೆಯಿಲ್ಲದೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು. ಗುರುವಾರ ವಿಧಾನ ಪರಿಷತ್‌ನಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ನಡೆದಿರುವ ದಾಳಿಯ ಘಟನೆಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿಯಲ್ಲಿದ್ದ ವೇಳೆ ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸಿದ ಸಭಾಪತಿ ಪ್ರತಾಪ್‌ಚಂದ್ರಶೆಟ್ಟಿ ಅವರು ಧ್ವನಿಮತದ ಮೂಲಕ 8 ವಿಧೇಯಕಗಳಿಗೂ ಅಂಗೀಕಾರ ದೊರಕಿಸಿಕೊಟ್ಟರು. 

ಎತ್ತಿನಹೊಳೆ ಯೋಜನೆ ಭೂಸ್ವಾಧೀನ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು(ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ-2018, ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಧೇಯಕ, ಎನ್‌ಐಇ ವಿಶ್ವವಿದ್ಯಾನಿಲಯ ವಿಧೇಯಕ, ಕರ್ನಾಟಕ ಋಣ ಪರಿಹಾರ ವಿಧೇಯಕ, ಆರ್.ವಿ.ವಿಶ್ವವಿದ್ಯಾನಿಲಯ ವಿಧೇಯಕ, ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ವಿಧೇಯಕ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ ಸೇರಿ 8 ವಿಧೇಯಕಗಳಿಗೆ ಧ್ವನಿಮತದ ಅಂಗೀಕಾರ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News