ಉಡುಪಿ: 25 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ
Update: 2019-02-14 20:18 IST
ಉಡುಪಿ, ಫೆ.14: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಪ್ರಯುಕ್ತ ಕರ್ನಾಟಕ ರಾಜ್ಯ ವತಿಯಿಂದ ಎರಡನೆ ಹಂತದ 25 ಮಂದಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉಡುಪಿಯ ವೆಲ್ಫೇರ್ ಅಸೋಸಿಯೇಶನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ನಿಸಾರ್ ಅಹ್ಮದ್ ವಹಿಸಿದ್ದರು. ಅತಿಥಿಗಳಾಗಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ, ಸೋಷಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಉಪಾಧ್ಯಕ್ಷ ರಹ್ಮಾನ್ ಮಲ್ಪೆ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಮಹಮ್ಮದ್ ಶಫೀಕ್ ಭಾಗವಹಿಸಿದ್ದರು. ತೌಹೀದ್ ಆದಿ ಉಡುಪಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.