×
Ad

ವೃತ್ತಿಪರ ಕುಶಲಕರ್ಮಿಗಳಿಗೆ ಸಾಧನಾ ಸಲಕರಣೆ ವಿತರಣೆ

Update: 2019-02-14 20:21 IST

ಉಡುಪಿ, ಫೆ.14: ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮದಡಿ ಟೈಲರಿಂಗ್, ಧೋಬಿ, ಕಮ್ಮಾರಿಕೆ, ಬಡಗಿ, ಗಾರೆ ಕೆಲಸ, ಬ್ಯೂಟಿ ಪಾರ್ಲರ್, ಕ್ಷೌರಿಕ ವೃತ್ತಿಯವರಿಗೆ ವಿವಿಧ ಸಾಧನಾ ಲಕರಣೆಗಳನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್. ಕೋಟ್ಯಾನ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಜಿಪಂ ಸದಸ್ಯರಾದ ಸುರೇಶ್ ಬಟವಾಡಿ, ವಿಲ್ಸನ್ ರೋಡ್ರಿಗಸ್, ಗೀತಾಂಜಲಿ ಎಂ. ಸುವರ್ಣ, ಶಿಲ್ಪಜಿ.ಸುವರ್ಣ, ಚಂದ್ರಿಕಾ ರಂಜನ್ ಕೇಲ್ಕರ್, ಜಿಪಂ ಯೋಜನಾ ನಿರ್ದೇಶಕಿ ಕೆ. ನಯನ, ಗ್ರಾಮಾಂತರ ಕೈಗಾರಿಕೆ ಇಲಾಖೆ ಉಪ ನಿರ್ದೇಶಕ ವಾಮನ ನಾಯ್ಕ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News